ಘಟಿಕಾಚಲದಿ ನಿಂತ ಪಟು ಹನುಮಂತನಘಟಿಕಾಚಲದಿ ನಿಂತ ಪಟು ಹನುಮಂತನ
ಪಠನೆಯ ಮಾಡಲುತ್ಕಟದಿ ಪೊರೆವೆನೆಂದು


ಚತುರ ಯುಗದಿ ತಾನು ಮುಖ್ಯಪ್ರಾಣನು
ಚತುರಮುಖನಯ್ಯನ
ಚತುರ ಮೂರುತಿಗಳನು ಚತುರತನದಿ ಭಜಿಸಿ
ಚತುರ್ಮುಖನಾಗಿ ಜಗಕೆ ಚತುರ್ವಿಧ ಫಲ ಕೊಡುತೆ


ಸರಸಿಜ ಭವಗೋಸ್ಕರ ಕಲ್ಮಷದೂರ
ವರ ಚಕ್ರತೀರ್ಥ ಸರ
ಮೆರೆವಾಚಲದಿ ನಿತ್ಯ ನರಹರಿಗೆದುರಾಗಿ
ಸ್ಥಿರಯೋಗಾಸನದಿ ಕರೆದು ವರಗಳ ಕೊಡುತೆ


ಶಂಖ ಚಕ್ರವ ಧರಿಸಿ ಭಕ್ತರ ಮನಃ-
ಪಂಕವ ಪರಿಹರಿಸಿ
ಪಂಕಜನಾಭ ಶ್ರೀ ಪುರಂದರವಿಠಲನ
ಬಿಂಕದ ಸೇವಕ ಸಂಕಟ ಕಳೆಯುತ

No comments: