ಏನು ಮಾಡಲೊ ಮಗನೆ ಯಾಕೆ ಬೆಳಗಾಯಿತೊ
ಏನು ಮಾಡಲೊ ಕೃಷ್ಣಯ್ಯ
ಏನು ಮಾಡಲಿ ಇನ್ನು ಮಾನಿನಿಯರು ಎನ್ನ
ಮಾನವ ಕಳೆಯುವರೊ ರಂಗಯ್ಯ
ಹಾಲು ಮೊಸರು ಬೆಣ್ಣೆ ಕದ್ದನೆಂಬುವರೊ
ಮೇಲಿನ ಕೆನೆಗಳ ಮೆದ್ದನೆಂಬುವರೊ
ಬಾಲಕರೆಲ್ಲರ ಬಡಿದನೆಂಬರೊ ಎಂಥ
ಕಾಳ ಹೆಂಗಸು ಇವನ ಹಡೆದಳೆಂಬುವರೊ
ಕಟ್ಟೆದ್ದ ಕರುಗಳ ಬಿಟ್ಟನೆಂತೆಂಬರೊ
ಮೆಟ್ಟೆ ಸರ್ಪನ ಮೇಲೆ ಕುಣಿದನೆಂಬುವರೊ
ಪುಟ್ಟ ಬಾಲೆಯರ ಮೋಹಿಸಿದನೆಂಬರೊ ಎಂಥ
ದುಷ್ಟ ಹೆಂಗಸು ಇವನ ಹಡೆದಳೆಂಬುವರೊ
ಗಂಗಾಜನಕ ನಿನ್ನ ಜಾರನೆಂತೆಂಬರೊ
ಶೃಂಗಾರಮುಖ ನಿನ್ನ ಬರಿದೆ ದೂರುವರೊ
ಮಂಗಳಮಹಿಮ ಶೀಪುರಂದರವಿಟ್ಠಲ
ಹಿಂಗದೆ ಎಮ್ಮನು ಸಲಹೆಂತೆಂಬರೊ
2 comments:
ನಿಮ್ಮ ಬ್ಲಾಗ್ ಇಷ್ಟವಾಯಿತು. ಸುಂದರವಾದ ಚಿತ್ರಗಳೊಂದಿಗೆ ದಾಸರ ಪದಗಳು. ಒಳ್ಳೆಯ ಪ್ರಯತ್ನ..
ನಿಮ್ಮ ಯತ್ನ ಚೆನ್ನಾಗಿದೆ
Post a Comment