ದಾರಿ ಯಾವುದಯ್ಯ ವೈಕುಂಠಕೆ ದಾರಿ ತೋರಿಸಯ್ಯ
ದಾರಿ ಯಾವುದಯ್ಯ ದಾರಿ ತೋರಿಸಯ್ಯ ಆ-
ಧಾರ ಮೂರುತಿ ನಿನ್ನ ಪಾದ ಸೇರುವುದಕ್ಕೆ
ಬಲು ಭವದನುಭವದಿ ಕತ್ತಲೆಯೊಳು
ಬಲು ಅಂಜುತೆ ನಡುಗಿ
ಬಳಲುತ್ತ ತಿರುಗಿದೆ ಹಾದಿಯ ಕಾಣದೆ
ಹೊಳೆವಂಥ ದಾರಿಯ ತೋರೊ ನಾರಾಯಣ
ಪಾಪ ಪೂರ್ವದಲ್ಲಿ ಮಾಡಿದುದಕೆ
ಲೇಪವಾಗಿದೆ ಕರ್ಮ
ಈ ಪರಿಯಿಂದಲಿ ನಿನ್ನ ನೆನೆಸಿಕೊಂಬೆ
ಶ್ರೀಪತಿ ಸಲಹೆನ್ನ ಭೂಪನಾರಾಯಣ
ಇನ್ನು ನಾ ಜನಿಸಲಾರೆ ಭೂಮಿಯ ಮೇಲೆ
ನಿನ್ನ ದಾಸನಾದೆನೊ
ಪನ್ನಗಶಯನ ಶ್ರೀ ಪುರಂದರವಿಠಲ
ಇನ್ನು ಪುಟ್ಟಿಸದಿರೊ ಎನ್ನ ನಾರಾಯಣ
ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
ದಾರಿ ಯಾವುದಯ್ಯ ದಾರಿ ತೋರಿಸಯ್ಯ ಆ-
ಧಾರ ಮೂರುತಿ ನಿನ್ನ ಪಾದ ಸೇರುವುದಕ್ಕೆ
ಬಲು ಭವದನುಭವದಿ ಕತ್ತಲೆಯೊಳು
ಬಲು ಅಂಜುತೆ ನಡುಗಿ
ಬಳಲುತ್ತ ತಿರುಗಿದೆ ಹಾದಿಯ ಕಾಣದೆ
ಹೊಳೆವಂಥ ದಾರಿಯ ತೋರೊ ನಾರಾಯಣ
ಪಾಪ ಪೂರ್ವದಲ್ಲಿ ಮಾಡಿದುದಕೆ
ಲೇಪವಾಗಿದೆ ಕರ್ಮ
ಈ ಪರಿಯಿಂದಲಿ ನಿನ್ನ ನೆನೆಸಿಕೊಂಬೆ
ಶ್ರೀಪತಿ ಸಲಹೆನ್ನ ಭೂಪನಾರಾಯಣ
ಇನ್ನು ನಾ ಜನಿಸಲಾರೆ ಭೂಮಿಯ ಮೇಲೆ
ನಿನ್ನ ದಾಸನಾದೆನೊ
ಪನ್ನಗಶಯನ ಶ್ರೀ ಪುರಂದರವಿಠಲ
ಇನ್ನು ಪುಟ್ಟಿಸದಿರೊ ಎನ್ನ ನಾರಾಯಣ
ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
1 comment:
ದಾಸರ ಪದಗಳನ್ನು ಸಂಗ್ರಹಿಸಿ ಪ್ರಕಟಿಸಿ ಸ್ತುತ್ಯಾರ್ಹ ಕಾರ್ಯ ಮಾಡಿತ್ತಿದ್ದೀರ, ಅದರೊಂದಿಗೆ ಸುಂದರವಾದ ಛಾಯಾಚಿತ್ರಗಳನ್ನು ಸಹ ಸೇರಿಸುತ್ತಿದ್ದೀರ. ಧನ್ಯವಾದಗಳು ವಿನೋದ್ ಅವರೆ.
Post a Comment