ರಂಗ ಬಾರೋ ರಂಗ ಬಾರೋ

ರಂಗ ಬಾರೋ ರಂಗ ಬಾರೋ ರಂಗಯ್ಯ ಬಾರೋ
ಪೊನ್ನುಂಗುರ ನಿನಗೀವೆ ಪನ್ನಗಶಯನನೆ ಬಾರೋ

ವೆಂಕಟರಮಣನೆ ಬಾರೋ ಪಂಕಜ ಚರಣವ ತೋರೋ
ಮುಕುಂದ ಮುಂದೆ ನಿಂದಾಡೋ ಕಿಂಕಿಣಿಕಿಣಿ ರವದಿಂದ

ಕರ್ಣದೊಳಿಟ್ಟ ಮಾಗಾಯಿ ಹೊನ್ನ ಕದಪಿಲಿ ಧುಮುಕಾಡುತ್ತ
ಪನ್ನಗಶಯನನೆ ನಿನ್ನ ಚಿನ್ನದ ಸರ ಹೊಳೆವುತ್ತ ಬಾರೋ

ಬಡನಡುವಿನ ಘಂಟೆ ಬಳುಕಿ ಢಣಢಣಿಸುತ್ತ
ಕಡಗ ಕಾಲಂದುಗೆ ಗೆಜ್ಜೆ ಅಡಿಗಡಿಗೆ ನುಡಿಸುತ್ತ ಬಾರೋ

ಮುಂಗುರುಳಿನ ಸೊಬಗಿನಿಂದ ರಂಗ ನಿನ್ನ ಫಣೆಯೊಳಿಟ್ಟ
ರಂಗು ಮಾಣಿಕ್ಯದರಳೆಲೆ ತೂಗಿ ತೂಗಿ ಓಲಾಡುತ್ತ ಬಾರೋ

ಕೊರಳಿಗಹಾಕಿದ ಹುಲಿಯುಗುರು ತೋರಮುತ್ತಿನ ಹಾರಂಗಳ್ಹೂಳೆಯುತ್ತ
ಪರಿಪರಿ ವಿಧಗಳಿಂದ ಪುರಂದರವಿಠಲ ಬಾರೋರಾಗ: ಮೋಹನ                           ತಾಳ: ಅಟ್ಟNo comments: