ರಾಮ ಮಂತ್ರವ ಜಪಿಸೊ - Rama mantrava japiso

ರಾಮ ಮಂತ್ರವ ಜಪಿಸೊ ಏ ಮನುಜಾ
ರಾಮ ಮಂತ್ರವ ಜಪಿಸೊ

ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ
ಸೋಮಶೇಖರ ತನ್ನ ಸತಿಗೆ ಪೇಳಿದ ಮಂತ್ರ

ಕುಲಹೀನನಾದರು ಕೂಗಿ ಜಪಿಸುವ ಮಂತ್ರ
ಸಭೆ ಭೀದಿ ಭೀದಿಯೊಳು ನುಡಿವ ಮಂತ್ರ
ಹಲವು ಪಾಪಂಗಳ ಹತಗೊಳಿಸುವ ಮಂತ್ರ
ಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ

ಸ್ನಾನ ಮೌನಂಗಳಿಗೆ ಸಾಧನದ ಮಂತ್ರ
ಜ್ಞಾನಿಗಳು ಮನದಿ ಧ್ಯಾನಿಪ ಮಂತ್ರ
ಹೀನಗುಣಂಗಳ ಹಿಂಗಿಸುವ ಮಂತ್ರ
ಏನೆಂಬೆ ವಿಭೀಷಣಗೆ ಪಟ್ಟಗಟ್ಟಿದ ಮಂತ್ರ

ಸಕಲ ವೇದಂಗಳಿಗೆ ಸಾರವೆನಿಪ ಮಂತ್ರ
ಮುಕುತಿ ಮಾರ್ಗಕೆ ಇದೇ ಮೂಲಮಂತ್ರ
ಭಕುತಿರಸಕೆ ಬಟ್ಟೆ ಒಮ್ಮೆ ತೋರುವ ಮಂತ್ರ
ಸುಖನಿಧಿ ಪುರಂದರವಿಠಲನ ಮಾಹಾ ಮಂತ್ರ1. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

2. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: