ನಾ ನಿನಗೇನ ಬೇಡುವದಿಲ್ಲಎನ್ನ ಹೃದಯಕಮಲದೊಳು ನೆಲಸಿರು ಹರಿಯೆ
ಶಿರ ನಿನ್ನ ಚರಣಕೆರಗಲಿ ಚಕ್ಷು
ಎರಕದಿಂದಲಿ ನಿನ್ನ ನೋಡಲಿ ಹರಿಯೆ
ನಿರುಮಾಲ್ಯ ನಾಸ ಘ್ರಾಣಿಸಲಿ ಎನ್ನ
ಕರಣ ಗೀತಂಗಳ ಕೇಳಲಿ ಹರಿಯೆ
ನಾಲಗೆ ನಿನ್ನ ಕೊಂಡಾದಲಿ ಎನ್ನ
ತೋಳು ಕರಂಗಳ ಮುಗಿಯಲಿ ಹರಿಯೆ
ಕಾಲು ತೀರ್ಥಯಾತ್ರೆಗೆ ಪೋಗಲಿ ಮನ
ಓಲೈಸಿ ನಿನ್ನನು ಸ್ಮರಿಸಲಿ ಹರಿಯೆ
ಚಿತ್ತ ನಿನ್ನೊಳು ಮುಳುಗಾಡಲಿ ನಿನ್ನ
ಭಕ್ತಜನರ ಸಂಗ ದೊರಕಲಿ ಹರಿಯೆ
ತತ್ತ್ವಯೋಗಭ್ಯಾಸಕ್ಕಾಗಲಿ ಉಕ್ತಿ
ಸತ್ಯಮೂರುತಿ ನಮ್ಮ ಪುರಂದರವಿಠಲ
No comments:
Post a Comment