ಅಂಬೆಗಾಲಿಕ್ಕುತಲಿ ಬಂದ ಗೋವಿಂದ

ಅಂಬೆಗಾಲಿಕ್ಕುತಲಿ ಬಂದ ಗೋವಿಂದ

ಅಂಬುಜನಾಭ ದಯದಿಂದ ಎನ್ನ ಮನೆಗೆ

ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನಳೆದು ಮೂರಡಿ ಮಾಡಿ ಬಂದ
ಕುಲನಾಶ ವನವಾಸ ನವನೀತ ಚೋರನಿವ
ಲಲನೆಯರ ವ್ರತಭಂಗ ವಾಹನತುರಂಗ

ಕಣ್ಣು ಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೆದರಿ ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನಣ್ಣ ಬೆಣ್ಣೆಯ ಕಳ್ಳ
ಮಾನವ ಬಿಟ್ಟು ಕುದುರೆಯನೇರಿದ

ನೀರ ಪೊಕ್ಕನು ಗಿರಯ ನೆಗಹಿ ಧರಣಿಯ ತಂದು
ನರಮೃಗ ಬಲಿಬಂಧ ಕೊರಳುಗೊಯಿಕ
ಶರಮುರಿದೊರಳೆಳೆದು ನಿರವಾಣಿ ಹಯ ಹತ್ತಿ
ಪುರಂದವಿಠಲ ಮನೆಗೆ ತಾ ಬಂದ

1 comment:

Swarna said...

ಮೆಚ್ಚಿನ ಪದವ ಇಲ್ಲಿ ಹಂಚಿಕೊಂಡ್ಡದ್ದಕ್ಕಾಗಿ ಧನ್ಯವಾದಗಳು
ಸ್ವರ್ಣಾ